ಸಂಪತ್‌ರಾಜ್ : ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು,ನ.೨೨- ಡಿಜೆಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಮಾಜಿ ಮೇಯರ್ ಸಂಪತ್‌ರಾಜ್ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ.ಹೃದ್ರೋಗ ಸಮಸ್ಯೆ ಉಂಟಾದ ಸಂಪತ್‌ರಾಜ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನ ಚಿಕಿತ್ಸಾಲಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪತ್‌ರಾಜ್ ಅವರ ಅರೋಗ್ಯ ತಪಾಸಣೆಯನ್ನು ವೈದ್ಯರು ನಡೆಸಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಸಂಪೂರ್ಣ ಚೇತರಿಸಿಕೊಂಡ ನಂತರ ಮತ್ತೆ ಅವರನ್ನು ಜೈಲಿಗೆ ರವಾನಿಸಲಾಗುತ್ತದೆ.
ಗಲಭೆ ಸಂಬಂಧ ಸಂಪತ್‌ರಾಜ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಜೈಲಿಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.