ಸಂಪುಟ ವಿಸ್ತರಣೆ ನಿಶ್ಚಿತ – ಸವದಿ

ಕಲಬುರಗಿ,ನ.೨೦- ನಾಲ್ಕೈದು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚಿಸಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಗೃಹ ಸಚಿವ ಅಮಿತ್‌ಶಾ ಹಾಗೂ ಪ್ರಧಾನಿ ಮೋದಿ ಅವರ ಜತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದರು. ಇನ್ನು ೨-೩ ದಿನಗಳಲ್ಲಿ ಸಂಪುಟ ವಿಸ್ತರಣೆಯಾಗುವುದು ನಿಶ್ಚಿತ ಎಂದು ಅವರು ಹೇಳಿದರು.