ಸಂಪುಟ ವಿಸ್ತರಣೆ. ಸದ್ಯದಲ್ಲೇ ಸಿಹಿ ಸುದ್ದಿ: ಬಿಎಸ್ ವೈ

ಬೆಂಗಳೂರು, ಜ.10- ಮಂತ್ರಿ ಮಂಡಲ ವಿಸ್ತರಣೆ ಕುರಿತಂತೆ ಕೇಂದ್ರದ ವರಿಷ್ಠರ ಜೊತೆಗೆ ಇಂದು ಚರ್ಚೆ ನಡೆದಿದ್ದು ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ. ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರ ಜೊತೆ ನಡೆಸಿದ ಮಾತುಕತೆ ಸಂತಸ ಹಾಗೂ ಸಮಾಧಾನ ತಂದಿದೆ ಎಂದುಅವರು  ಹೇಳಿದ್ದಾರೆ.

ದಿಲ್ಲಿಯಲ್ಲಿ ವರಿಷ್ಠರ ಜೊತೆಗಿನ ಮಾತುಕತೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು , ಸಂಪುಟ ವಿಸ್ತರಣೆ ವಿಚಾರದಲ್ಲಿ ಆದಷ್ಟು ಬೇಗ ಸಿಹಿ ಸುದ್ದಿ ನೀಡೋದಾಗಿ ತಿಳಿಸಿದರು.
ಈ ಸಭೆ ಅತ್ಯಂತ ಸಂತಸ ಹಾಗೂ ಸಮಾಧಾನ ತಂದಿದೆ ಎಂದು ಹೇಳಿ. ಆದಷ್ಟು ಶೀಘ್ರವೇ ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ ಎಂದರು.

ಇನ್ನು ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಗಳ ಕುರಿತಾಗಿಯೂ ಮಾತುಕತೆ ನಡೆದಿದ್ದು, ಮೂರೂ ಕ್ಷೇತ್ರಗಳಲ್ಲಿ ಗೆಲ್ಲುವ ಪಣ ತೊಟ್ಟಿರೋದಾಗಿ ಯಡಿಯೂರಪ್ಪ ಹೇಳಿ. ಈ ಕ್ಷೇತ್ರಗಳಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಹೀಗಾಗಿ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಸಿದ್ದಪಡಿಸಿ ಹೈಕಮಾಂಡ್‌ಗೆ ರವಾನಿಸೋದಾಗಿ ಯಡಿಯೂರಪ್ಪ ಹೇಳಿದರು.
ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಭಾಗಿಯಾಗಿದ್ದರು.