ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ : ಸಿಎಂ

ಹುಬ್ಬಳ್ಳಿ, ನ.೪- ಉಪ ಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ.
ನವೆಂಬರ್ ೭ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಹೇಳಿರುವುದು ಆಕಾಂಕ್ಷಿಗಳ ಆಸೆಗೆ ತಣ್ಣೀರು ಎರಚಿದಂತಾಗಿದೆ.
ಹೈಕಮಾಂಡ್ ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗಲ್ಲ. ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಹೇಳಿಕೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದ್ದು ಮತ್ತೆ ಯಾವಾಗ ಸಂಪುಟ ವಿಸ್ತರಣೆಯಾಗಲಿದೆ ಎಂದು ಚಾತಕ ಪಕ್ಷಿಯಂತೆ ಎದುರು ನೋಡುವಂತಾಗಿದೆ.