ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ; ಅರುಣ್ ಸಿಂಗ್

ಬೆಂಗಳೂರು, ಮೇ.14-ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಮುಖ್ಯಮಂತ್ರಿಯವರ ಪರಮಾಧಿಕಾರ ಎಂದು ಸ್ಪಷ್ಟಪಡಿಸಿದರು.
ರಾಜ್ಯಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುಲಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.