ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬನ್ನಿ: ಶಾಸಕ ಪಾಟೀಲ್

(ಸಂಜೆವಾಣಿ ವಾರ್ತೆ)
ಹುಮನಾಬಾದ್:ಜ.12: ಪ್ರಗತಿ ಪರಿಶೀಲನೆ ಸಭೆಗೆ ಹಾಜರಾಗುವ ಅಧಿಕಾರಿಗಳು ತಮ್ಮ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾ ಗಬೇಕು . ತಮ್ಮ ಇಲಾಖೆಗೆ ಸಂಬಂಧಿಸಿದ ವಿಷಯದ ಕುರಿತು ಮಾಹಿತಿ ಕೇಳಿದರೆ ಕಕ್ಕಾಬಿಕ್ಕಿಯಾಗದೇ ಸೂಕ್ತ ಉತ್ತರ ನೀಡಬೇಕು ಎಂದು ಶಾಸಕ ರಾಜಶೇಖರ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು .
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಹಮನಾ ಬಾದ್ ಮತಕ್ಷೇತ್ರದ ಪ್ರಗತಿ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾ ಡಿದರು .
ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮ ಕುರಿತು ಗಾರಿಗಳ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಗಳಿಲ್ಲ ಅಂದರೆ ಹೇಗೆ ಕಾರ್ಯಗಳು ಕಚೇರಿ ನಿರ್ವಹಣೆ ಮಾಡುತ್ತಿದ್ದಿರಿ ಎನ್ನುವ ಪ್ರಶ್ನೆ ನನಗೆ ಕಾಡುತ್ತಿದೆ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು . ಮತಕ್ಷೇತ್ರದಲ್ಲಿ ಹುಮನಾಬಾದ್ ನಡೆಯುತ್ತಿರುವ ಕಾಮಗಾರಿಗಳ ಕುರಿತು ಜಿಪಂ ಅಧಿಕಾರಿಗಳು ಹುಮನಾಬಾದ್ ಕಚೇರಿಗೆ ನೀಡಿ ಪರಿಶೀಲನೆ ನಡೆಸಬೇಕು .
ಪರಿಶೀಲನೆ ಸಂದರ್ಭದಲ್ಲಿ ಲೋಪ ದೋಷಗಳು ಕಂಡು ಬಂದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು .
ದಿನನಿತ್ಯ ಜನಸಾಮಾನ್ಯರು ಜೀವನದಲ್ಲಿ ನೆಮ್ಮದಿ ಬದುಕು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಸರಕಾರ ಕೋಟ್ಯಂತರ ರೂಪಾಯಿ ಅನುದಾನ ವೆಚ್ಚ ಮಾಡಿ ಜಲ ಚ ಜೀವನ ಮಿಷನ್ ಯೋಜನೆ ಜಾರಿಗೆ ತರಲಾಗಿದೆ . ಬಹುತೇಕ ಗ್ರಾಮಗಳಲ್ಲಿ ಸೂಕ್ತ ಸಮಯಕ್ಕೆ ಜನರಿಗೆ ನೀರು ಸಿಗುತ್ತಿಲ್ಲ ಎಂದು ಜನರಿಂದ ಆರೋಪಗಳು ಕೇಳಿ ಬರುತ್ತಿವೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರು
ಜನರ ಕಲ್ಯಾಣಕ್ಕಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದೇ , ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟರ ಮಟ್ಟಿಗೆ ಕೆಲಸ ಕಾರ್ಯಗಳು ಅಭಿವೃದ್ಧಿಯಾಗಿದೆ ಎನ್ನುವ ದೃಷ್ಟಿಯಿಂದ ಪ್ರಗತಿ ಪರಿಶೀಲನೆ ಸಭೆ ಆಯೋಜನೆ ಮಾಡಲಾಗುತ್ತದೆ . ಅಧಿ ಕಾರಿಗಳು ಅಭಿವೃದ್ಧಿ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಿಳಿಸಿದರು .
ವಿಧಾನ ಪರಿಷತ್ ಸದಸ್ಯ ಡಾ . ಚಂದ್ರಶೇಖರ ಪಾಟೀಲ್ , ತಹಸೀಲ್ದಾರ್ ಡಾ . ಪ್ರದೀಪಕುಮಾರ ಹಿರೇಮಠ , ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ,
ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ , ಪಿ ಎಲ್ ಡಿ ಬಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾಳಶೆಟ್ಟಿ ತಾಲೂಕು ವೈದ್ಯಾಧಿಕಾರಿ ಡಾ . ಶಿವಕುಮಾರ ಸಿದ್ದೇಶ್ವರ , ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ . ನಾಗನಾಥ ಹುಲಸೂರೆ , ಕೃಷಿ ನಿರ್ದೇಶಕ ಗೌತಮ್ , ಪುರಸಭೆ ಮುಖ್ಯಾಧಿಕಾರಿ ಶಿವರಾಜ ರಾಠೋಡ್ , ಪಶು ಸಂಗೋಪನೆ ಇಲಾಖೆ ನಿರ್ದೇಶಕ ಡಾ . ಗೋವಿಂದ ಸೇರಿದಂತೆ ಹುಮನಾಬಾದ್ , ಚಿಟಗುಪ್ಪ ಹಾಗೂ ಬಸವಕಲ್ಯಾಣ ತಾಲೂಕ ಮಟ್ಟದ ಅಧಿ ಕಾರಿಗಳು ಇದ್ದರು .