ಸಂಬರಗಿಗೆ ಚಾಮರಾಜಪೇಟೆ ಪೊಲೀಸರಿಂದ ನೋಟೀಸ್

ಬೆಂಗಳೂರು, ಸೆ. ೧೩- ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಸಂಬರಗಿಗೆ ಚಾಮರಾಜಪೇಟೆ ಪೊಲೀಸರು ನೋಟೀಸಿ ಜಾರಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಶ್ರೀಲಂಕಾ ರಾಜಧಾನಿ ಕೊಲಂಬೊದ ಕ್ಯಾಸಿನೊದಲ್ಲಿ ನಡೆದ ಪಾರ್ಟಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಸಂಬರಗಿ ಆರೋಪಿಸಿದ್ದ ಹಿನ್ನೆಲೆಯಲ್ಲಿ ಈ ನೋಟೀಸ್ ಜಾರಿ ಮಾಡಲಾಗಿದೆ.
ಈಗಾಗಲೇ ಸಿಸಿಬಿ ಎದುರು ಸಂಬರಗಿ ಹಾಜರಾಗಿ ಅವರ ಬಳಿ ಇದ್ದ ದಾಖಲೆಗಳನ್ನು ತನಿಖಾ ತಂಡಕ್ಕೆ ಒದಗಿಸಿದ್ದಾರೆ. ಮತ್ತೊಮ್ಮೆ ಬರುವ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಜಮೀರ್ ವಿರುದ್ಧ ಆರೋಪ ಮಾಡಿರುವ ಬಗ್ಗೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವಂತೆಯೂ ಪೊಲೀಸರು ಸೂಚಿಸಿದ್ದಾರೆ.
ಇಂದು ಸಂಬರಗಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ತೆರಳಿ ವಿವರ ನೀಡಿದ ಆಧಾರದ ಮೇಲೆ ಶಾಸಕ ಜಮೀರ್ ಅಹ್ಮದ್ ಅವರಿಗೂ ನೋಟೀಸ್ ನೀಡಲಾಗುವುದು ಎಂದು ಪಶ್ಚಿಮ ವಲಯ ಡಿಸಿಪಿ ಡಾ. ಸಂಜೀವ್ ತಿಳಿಸಿದ್ದಾರೆ.
ಸಂಬರಗಿ ವಿರುದ್ಧವೂ ಈಗಾಗಲೇ ಎಫ್‌ಐಆರ್ ದಾಖಲಾಗಿದೆ.