ರಾಯಚೂರು, ಜೂ.೨೯- ಜಿಲ್ಲೆಯಾದ್ಯಂತ ಮುಸ್ಲಿಂ ಭಾಂದವರು ಶ್ರದ್ಧೆ, ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.
ನಗರ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಳಿಕ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಮಕ್ಕಳು ಹಿರಿಯರು ಸಾಂಪ್ರದಾಯಿಕ ಹೊಸ ಬಟ್ಟೆ ಧರಿಸಿ ಬಂದಿದ್ದರು. ತಲೆ ಮೇಲೆ ವಿವಿಧ ವಿನ್ಯಾಸಗಳ ಟೊಪ್ಪಿಗೆ ಧರಿಸಿ ಗಮನ ಸೆಳೆದರು.ಬಹುತೇಕರು ಅತ್ತರ್ ಸಿಂಪಡಿಸಿಕೊಂಡು ಸುಂಗಂಧ ಹರಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ.ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಕಾಂಗ್ರೆಸ್ ಮುಖಂಡ ಮಹ್ಮದ್ ಶಾಲಂ,ಜಿ.ಶಿವಮೂರ್ತಿ,ಅರುಣ್ ದೋತರಬಂಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.