ಕೆಂಭಾವಿ:ಜೂ.30:ಪಟ್ಟಣ ಸೇರಿದಂತೆ ವಿವಿಧೆಡೆ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು.ಪಟ್ಟಣದ ಹಿಲ್ ಟಾಪ್ ಕಾಲೋನಿಯಲ್ಲಿಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ನಂತರ ಬಂಧು ಬಾಂಧವರೊಂದಿಗೆ ಹಾಗೂ ಗೆಳೆಯರೊಂದಿಗೆ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.