ಸಂಭ್ರಮದ ರಂಜಾನ್ ಹಬ್ಬ ಆಚರಣೆ

ಕೊಲ್ಹಾರ:ಏ.12: ಪಟ್ಟಣದ ಮುಸ್ಲಿಂ ಬಾಂಧವರಿಂದ ಸಂಭ್ರಮ ಹಾಗೂ ಸಡಗರದಿಂದ ರಂಜಾನ್ ಹಬ್ಬವನ್ನು ಆಚರಣೆ ಮಾಡಲಾಯಿತು.

ಮುಂಜಾನೆ 9 ಗಂಟೆಯ ಹೊತ್ತಿಗೆ ಈದ್ಗಾ ಮೈದಾನಕ್ಕೆ ಆಗಮಿಸಿದ ಮುಸ್ಲಿಂ ಬಾಂಧವರಿಗೆ ಜಾಮೀಯಾ ಮಸ್ಜಿದಿಯ ಇಮಾಮ್ ಮೌಲಾನಾ ಮುಬಾರಕ ಅಲಿ ರಂಜಾನಿನ ತತ್ವಗಳ ಹಾಗೂ ಮೌಲ್ಯಗಳ ಬಗ್ಗೆ ಪ್ರವಚನ ನೀಡಿದರು. 10:30 ಗಂಟೆಗೆ ಸಾಮೂಹಿಕ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಪ್ರಾರ್ಥನೆಯ ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಪಟ್ಟಣದ ಮುಸ್ಲಿಂ ಮುಖಂಡರು, ಅಂಜುಮನ್ ಕಮಿಟಿಯ ಪದಾಧಿಕಾರಿಗಳು ಇತರರು ಈ ಸಂದರ್ಭದಲ್ಲಿ ಇದ್ದರು.