ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಸಿರವಾರ,ಜೂ.೦೧-
ತಾಲೂಕಿನ ಬಲ್ಲಟಗಿ ಗ್ರಾಮದ ಸರಕಾರಿ ಉನ್ನತೀಕರಿಸಿದ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರ -ಸಂಭ್ರಮದಿಂದ ಮಾಡಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷರಾದ ಪಂಪಾಪತಿ ಮುಳ್ಳೂರ ಹಾಗೂ ಮುಖ್ಯ ಗುರುಗಳು ಮತ್ತು ಸಿಬ್ಬಂದಿ ವರ್ಗದವರು ಮಕ್ಕಳಿಗೆ ಸಿಹಿ ವಿತರಿಸಿ ಗುಲಾಬಿ ಹೂಗಳನ್ನು ನೀಡುವ ಮೂಲಕ ಶಾಲೆಗೆ ಪ್ರೀತಿಪೂರ್ವಕವಾಗಿ ಸ್ವಾಗತಿಸಿ ಶಾಲಾ ಪ್ರಾರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಪಂಪಾಪತಿ ಮುಳ್ಳೂರ ಅವರು ಮಾತನಾಡಿ ಮಕ್ಕಳಿಗೆ ಸರಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಅತ್ಯುತ್ತಮ ಸೌಲಭ್ಯಗಳನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಬಲ್ಲಟಗಿ ಗ್ರಾಮಕ್ಕೆ ಹಾಗೂ ನಮ್ಮ ಸರಕಾರಿ ಶಾಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ಮುಖ್ಯ ಗುರುಗಳಾದ ಚೆನ್ನಪ್ಪ ದೊರೆ, ಶಿಕ್ಷಕರಾದ, ವೇದ ಕೆ ವಿ, ತಿಪ್ಪವ್ವ ಘಂಟಿ,ದಿವ್ಯ ನಾಯ್ಕ, ಶ್ರೀಮಂತಯ್ಯ ಅಮೋಗಿಮಠ , ಬಸವರಾಜ ದೇಶನೂರು, ತುಗಲಯ್ಯ ಇದ್ದರು.