
(ಸಂಜೆವಾಣಿ ವಾರ್ತೆ)
ಬೀದರ್ :ಸೆ.15:ಸಂವಿಧಾನದಿಂದ ಇಂದು ಭಾರತ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ರಾಜ್ಯದ ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅಭಿಪ್ರಾಯ ಪಟ್ಟರು.
ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜರುಗಿದ ‘ಬನ್ನಿ ಸಂವಿಧಾನ ಓದೋಣ’ ಶಿರ್ಸಿಕೆಯಡಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ದೇಶಕ್ಕೆ ಸಮಾನತೆ ಬರಲು ಸಂವಿಧಾನವೇ ಮೂಲ ಕಾರಣ. ಹಿಂದೆ ರಾಜರ ಮಕ್ಕಳು ಮಾತ್ರ ರಾಜರಾಗುತ್ತಿದ್ದರು, ಬಡವರ ಮಕ್ಕಳು ಬಡವರಾಗಿಯೇ ಬದುಕುತ್ತಿದ್ದರು. ಆದರೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದ ಮೇಲೆ ದೇಶದಲ್ಲಿ ಈಗ ಬಡವರು ಮಂತ್ರಿಗಳಾಗಿ, ಹಿರಿಯ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿದೆ. ಒಟ್ಟಾರೆ ಎಲ್ಲರೂ ಒಂದೇ ವೇದಿಕೆಯಡಿ ಸಮಾನತೆಯಿಂದ ಬದುಕಲು ಸಂವಿಧಾನದಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ಇಂದು ಜಗತ್ತು ನಮ್ಮ ದೇಶದ ಕಡೆ ನೋಡಲು ನಮ್ಮ ಬಲಿಷ್ಠ ಸಂವಿಧಾನವೇ ಮೂಲ ಕಾರಣ ಎಂಬುದು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಇಲ್ಲಿ ಪ್ರತಿಯೊಬ್ಬರಿಗೆ ವಾಕ್ ಸ್ವಾತಂತ್ರ್ಯ, ಬದುಕುವ ಸ್ವಾತಂತ್ರ್ಯ, ಬರೆಯುವ ಸ್ವಾತಂತ್ರ್ಯ, ಇದೆಲ್ಲಕ್ಕೂ ಮಿಗಿಲಾಗಿ ಪತ್ರಿಕಾ ರಂಗಕ್ಕೆ ಸ್ವತಂತ್ರ ಬರವಣಿಗೆ ತಂದುಕೊಡಲು ಸಂವಿಧಾನವೇ ಮುಖ್ಯ ಕಾರಣವಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞಾ ಬೋಧನೆ ಮಾಡಿಸಿದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧು, ಹಿರಿಯ ಮುಖಂಡರಾದ ಅನಿಲ ಬೆಲ್ದಾರ್, ಮನ್ನಾನ್ ಸೇಠ್ ಸೇರಿದಂತೆ ಎಲ್ಲ ಶಾಲಾ- ಕಾಲೇಜುಗಳ ಮುಖ್ಯಸ್ಥರು, ಆಡಳಿತ ಮಂಡಳಿಯವರು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಇಂದು ಇಡೀ ವಿಶ್ವಾದ್ಯಂತ 2:30 ಕೋಟಿ ಜನರು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದ್ದು, ಬೀದರ್ ಜಿಲ್ಲೆಯಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ತಮ್ಮ ಹೆಸರು ನೋಂದಾಯಿಸಿ ಜಿಲ್ಲೆಯಾದ್ಯಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಗಮನಾರ್ಹ