ಸಂವಿಧಾನವು ಕಾನೂನುಗಳ ತಾಯಿ ಇದ್ದಂತೆ

ಬೀದರ:ನ.10: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ವಕೀಲರ ಸಂಘ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವು ನವೆಂಬರ್ 9ರಂದು ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಕಾಡಲೂರು ಸತ್ಯ ನಾರಾಯಣಾಚಾರ್ಯ ಅವರು, ಭಾರತೀಯ ಸಂವಿಧಾನವು ಕಾನೂನುಗಳ ತಾಯಿ ಇದ್ದಂತೆ ಎಂದು ತಿಳಿಸಿದರು. ಮನುಷ್ಯನಿಗೆ ಅವನ ಜನನದಿಂದ ಹಿಡಿದು ಕೊನೆಯವರೆಗೂ ಕಾನೂನಿನ ಅವಶ್ಯಕವಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಗದೀಶ ಜಗತಾಪ ಅವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಂiÀiಧೀಶರಾದ ರಾಧಾ ಹೆಚ್.ಆರ್., ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಝರೀನಾ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ.ಗೌಡ., ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಯಮನಪ್ಪ ಕೆ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ರಾಮ ಟಿ.ಪಿ., ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅಪರ್ಣಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿನಾಯಕ ವಣಖಂಡೆ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಈಶ್ವರ ಮುಸಲ್ಮಾರಿ, ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ, ತಾಪಂ ಕಾರ್ಯನಿರ್ವಹಣಾಧಿಕಾರಿ ಗದಗೆಪ್ಪ ಹಾಗೂ ಇತರರು ಇದ್ದರು.
ಸಮಾರಂಭದಲ್ಲಿ ಅರೇಕಾಲಿಕ ಸ್ವಯಂ ಸೇವಕರು ಹಾಗೂ ಪ್ಯಾನಲ್ ವಕೀಲರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಸಹಾಯಕ ಶಂಕ್ರಪ್ಪ ಜನಕಟ್ಟಿ ಹಾಜರಿದ್ದರು. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ ಬಿರಾದಾರ ಅವರು ನಿರೂಪಿಸಿದರು. ತಾಪಂ ಸಹಾಯಕ ನಿರ್ದೇಶಕರಾದ ಶರತಕುಮಾರ ಅವರು ವಂದಿಸಿದರು.