ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಕಪನಿಂಬರಗಿಯಲ್ಲಿ ಅದ್ದೂರಿ ಸ್ವಾಗತ

ವಿಜಯಪುರ,ಜ.31:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರಕ್ಕೆ ಇಂಡಿ ಉಪವಿಭಾಗದ ಕಪನಿಂಬರಗಿ ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.

ಸರ್ಕಾರದ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ “ಸಂವಿಧಾನ ಜಾಗೃತಿ ಜಾಥಾ” ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಅದರಂತೆ ಇಂಡಿ ಉಪವಿಭಾಗದ ಕಪನಿಂಬರಗಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು.

ನಂತರ ಹಡಲಸಂಗ, ಕೋಳುರಗಿ, ಹೊರ್ತಿಗೆ ಬಂದು ಸಂಜೆ ಗ್ರಾಮ ಪಂಚಾಯತಿಗಳ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ” ದ ಟ್ಯಾಬ್ಲೋ ಅನ್ನು ಅತ್ಯಂತ ವಿಜ್ರಂಭಣೆಯಿಂದ ಸ್ವಾಗತ ಮಾಡಿಕೊಂಡು, ಕಾರ್ಯಕ್ರಮ ನೆರವೇರಿಸಲಾಯಿತು.

ಈ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಕಾರ್ಯಕ್ರಮವನ್ನು ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಭಣೆಯಿಂದ “ಸಂವಿಧಾನ ಜಾಗೃತಿ ಜಾಥಾ” ಕುರಿತು ವಿಶ್ಲೇಷಿಸಿ ಉಪನ್ಯಾಸ ನೀಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ಗಣ್ಯರು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಜೆ. ಇಂಡಿ, ಅಧೀಕ್ಷಕ ಚನ್ನಲಿಂಗಪ್ಪ ಚೌಧರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.