ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಬರಟಗಿ-ತಿಕೋಟಾದಲ್ಲಿ ಅದ್ದೂರಿ ಸ್ವಾಗತ

ವಿಜಯಪುರ,ಫೆ.1:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರಕ್ಕೆ ಬರಟಗಿ ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.

ಸರ್ಕಾರದ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ “ಸಂವಿಧಾನ ಜಾಗೃತಿ ಜಾಥಾ” ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಅದರಂತೆ ಜ.30ರಂದು ವಿಜಯಪುರ ಉಪವಿಭಾಗದ ಹಿಟ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ಬೈಕ್ ರ್ಯಾಲಿ ಮೂಲಕ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ನಂತರ ಜುಮನಾಳ, ತೊರವಿ, ಮಾರ್ಗವಾಗಿ ಬರಟಗಿಯಲ್ಲಿ ಸಂಜೆ ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ಟ್ಯಾಬ್ಲೋಗೆ ಅದ್ದೂರಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡು, ಕಾರ್ಯಕ್ರಮ ನೇರವೇರಿಸಲಾಯಿತು. ಈ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಕಾರ್ಯಕ್ರಮವನ್ನು ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಭಣೆಯಿಂದ “ಸಂವಿಧಾನ ಜಾಗೃತಿ ಜಾಥಾ” ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಗಣ್ಯರಾದ ಸಿದ್ದು ರಾಯಣ್ಣನವರ, ಪರಶುರಾಮ ಗರಸಂಗಿ, ಸದಾನಂದ ಬಡಿಗೇರ ಹಾಗೂ ಇತರರು ಉಪಸ್ಥಿತರಿದ್ದರು.

ತಿಕೋಟಾದಲ್ಲಿ ಅದ್ದೂರಿ ಸ್ವಾಗತ :

ಸಂವಿಧಾನ ಜಾಗೃತಿ ಜಾಥವು ತಿಕೋಟಾ ತಾಲ್ಲೂಕಿನ ಅರಕೇರಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಾಥಕ್ಕೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಗೀತಾ ಮಾನವರ ಪೂಜೆ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಈ ಜಾಥಾದ ಉದ್ದೇಶ ಹಾಗೂ ಸಂವಿಧಾನದ ಆಶೋತ್ತರಗಳ ಕುರಿತು ಸಾರ್ವಜನಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಂ.ಪಾಟೀಲ ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು, ಊರಿನ ಪ್ರಮುಖರು, ವಿವಿಧ ಸಂಘಟನೆಯ ಪ್ರಮುಖರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.