ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ನ.28: ಶಾಲಾ ಹಂತದಿಂದಲೇ ಸಂವಿಧಾನ, ಅದರ ಪೀಠಿಕೆ, ರಾಷ್ಟ್ರಪಿತ,ರಾಷ್ಟ್ರ ನಾಯಕರ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಆದರ್ಶ ವ್ಯಕ್ತಿಗಳ ಬಗ್ಗೆ ಮಕ್ಕಳಿಗೆ ತಿಳಿಸುವುದರಿಂದ ದೇಶಾಭಿಮಾನ, ಐಕ್ಯತೆ, ಜ್ಯಾತ್ಯತೀತ ಹಾಗೂ ಸಹೋದರತ್ವದ ಗುಣಗಳು ಬೆಳೆಯುತ್ತವೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಅಭಿಪ್ರಾಯ ಪಟ್ಟರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ದಿನ ಪ್ರಯುಕ್ತ ಹಮ್ಮಿಕೊಂಡಿದ್ದ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಶಾಲಾ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಬೋಧಿಸಿ ಮಾತನಾಡಿ ಈ ಬೆಳವಣಿಗೆಯಿಂದ ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ ರಾಜ ಪ್ರಭುತ್ವ, ಲಿಖಿತ ಮತ್ತು ಅಲಿಖಿತ ಸಂವಿಧಾನಗಳ ನಡುವಣ ವ್ಯತ್ಯಾಸ ತಿಳಿಯುತ್ತಾರೆ.
ದೇಶ, ದೇಶಭಾಷೆಗಳು,ಧರ್ಮಗಳು, ರಾಜ್ಯಗಳು,ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಕ್ಕೂಟ ವ್ಯವಸ್ಥೆ ಕುರಿತು ಅರಿತು ಕೊಳ್ಳುತ್ತಾರೆ ಎಂದು ಹೇಳಿದರು.
ಶಿಕ್ಷಕರಾದ ದಿಲ್ಷಾದ್ ಬೇಗಂ, ಕೆ.ಸುಮತಿ, ವೈಶಾಲಿ, ಶ್ವೇತಾ, ಉಮ್ಮೇಹಾನಿ, ರಾಮಾಂಜಿನೇಯ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ, ಸಣ್ಣ ದುರ್ಗೇಶ, ಪ್ರಜ್ವಲ್ ಮುಂತಾದವರು ಉಪಸ್ಥಿತರಿದ್ದರು.