ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ


ಲಕ್ಷ್ಮೇಶ್ವರ,ಸೆ.16: ಪಟ್ಟಣದ ಉಮಾ ವಿದ್ಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಕೆ ಆನಂದ ಶೀಲ್ ಅವರು ಮಾತನಾಡಿ ಪ್ರಪಂಚದಲ್ಲಿಯೇ ಭಾರತ ದೇಶವು ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಸಂವಿಧಾನಕ್ಕೆ ರಾಷ್ಟ್ರವಾಗಿದೆ, ದೇಶಕ್ಕೆ ಸ್ವಾತಂತ್ರ್ಯ ದೊರೆತನಂತರ ನಮ್ಮದೇ ಆದ ಸಂವಿಧಾನ ಇರಲಿಲ್ಲಾ ಈ ನಿಟ್ಟಿನಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅನೇಕ ರಾಷ್ಟ್ರಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಿ
ದೇಶಕ್ಕೆ ಅಗತ್ಯವಾದ ಸಂವಿಧಾನವನ್ನು ರಚಿಸಿದರು ಸಂವಿಧಾನದ ಪೀಠಿಕೆಯಲ್ಲಿ ಈ ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನಕ್ಕೆ ಬದ್ಧವಾಗಿ ನಡೆದುಕೊಳ್ಳುವ ಪ್ರತಿಜ್ಞೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಮ್ ಮುಂದಿನ್ ಮನಿ, ಸಿಪಿಐ ಬಿ ಎನ್ ಮಾಡಳ್ಳಿ, ಪುರಸಭೆಯ ಸಿಬ್ಬಂದಿ ವರ್ಗದವರು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳು, ಪುರಸಭೆಯ ಸದಸ್ಯರುಗಳು, ಕಂದಾಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.