ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ಗೌರವ ನಮನ

ಕಲಬುರಗಿ,ಏ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಪ್ರತಿಮೆಗೆ ಇಂದು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಮತ್ತು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಇದಕ್ಕು ಮುನ್ನ ಬುದ್ಧ ವಿಹಾರದ ಪೂಜ್ಯ ಸಂಗಾನಂದ ಭಂತೇಜಿ ಅವರ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಬುದ್ಧ ವಂದನೆ ಸಲ್ಲಿಸಲಾಯಿತು.
ಕಲಬುರಗಿ ನಗರ ಪೆÇಲೀಸ್ ಆಯುಕ್ತ ಆರ್.ಚೇತನಕುಮಾರ, ಡಿ.ಸಿ.ಪಿ.ಅಡ್ಡೂರು ಶ್ರೀನಿವಾಸಲು, ಎಸ್.ಪಿ. ಇಶಾ ಪಂತ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಅವರು ಸಹ ಶ್ರೇಷ್ಟ ಆರ್ಥಿಕ ತಜ್ಞನಿಗೆ ಗೌರವ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ, ಮಹಾನಗರ ಪಾಲಿಕೆಯ ಕಾರ್ಯನಿರ್ವಹಕ ಅಭಿಯಂತ ಶಿವಣಗೌಡ ಪಾಟೀಲ, ಜಿಲ್ಲಾ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ದೊಡ್ಡಮನಿ, ಜಿಲ್ಲಾ ಎಸ್.ಸಿ-ಎಸ್.ಟಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಹುಬಳಿ, ಗೌರವಾಧ್ಯಕ್ಷ ಸೋಮಶೇಖರ ಮದನಕರ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಇದ್ದರು.
ಇದೇ ಸಂದರ್ಭದಲ್ಲಿ ಡಿ.ಸಿ. ಯಶವಂತ ವಿ. ಗುರುಕರ್ ಅವರು ಪಂಚಶೀಲ ಮತ್ತು ಪೂಜ್ಯ ಸಂಗಾನಂದ ಭಂತೇಜಿ ಅವರು ನೀಲಿ ಧ್ವಜಾರೋಹಣ ಮಾಡಿದರು.