ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ

ಹುಬ್ಬಳ್ಳಿ, ಏ.14: ತಾಲೂಕು ಆಡಳಿತಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಸಾಕೇಂತಿಕವಾಗಿ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪಗೋಳ, ಅಪರ ತಹಶೀಲ್ದಾರರಾದ ಜಿ.ವಿ.ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯರಾದ ಸಿ.ಆರ್.ಅಂಬಿಗೇರ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಡಾ.ಸಂಗಮೇಶ ಬಂಗಾರಿಮಠ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮುಖಂಡರು ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.