ಸಂಶೋಧನೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು: ಡಾ.ಪಿ.ಎಂ.ಶಿವಪ್ರಸಾದ್

ಸಂಜೆವಾಣಿ ವಾರ್ತೆ
ಪಾಂಡವಪುರ:ಮಾ.17:- ಸಮಸ್ಯೆಗಳಿಗೆ ಸಂಶೋಧನೆಗಳ ಮೂಲಕವೇ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮೈಸೂರಿನ ಟೆರೇಷಿಯನ್ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪಿ.ಎಂ.ಶಿವಪ್ರಸಾದ್ ಹೇಳಿದರು.
ತಾಲೂಕಿನ ಚಿನಕುರಳಿ ಗ್ರಾಮದ ಎಸ್‍ಟಿಜಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಐಕ್ಯೂಎಸಿ ಇವರ ಸಹಯೋಗದಲ್ಲಿ `ಸಂಶೋಧನಾ ವಿಧಾನ’ ಎಂಬ ವಿಷಯ ಕುರಿತು ಕಾರ?ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸಂಶೋಧನೆಯ ಕುರಿತು ಆಸಕ್ತಿ ಮತ್ತು ಕುತೂಹಲವನ್ನು ಮೂಡಿಸಿಕೊಳ್ಳ
ಬೇಕು ಹಾಗೂ ಸಂಶೋಧನಾ ಸಮಸ್ಯೆಗಳನ್ನು ಗುರುತಿಸುವಿಕೆ, ಮಾಹಿತಿ ಸಂಗ್ರಹಣೆ ಮತ್ತು ವಿಶ್ಲೇಷಣೆಗಳನ್ನು ಕುರಿತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಸಂಶೋಧನಾ ಕಾರ್ಯದಲ್ಲಿ ಕ್ರಿಯಾಶೀಲರಾಗಿ ಸಾಮಾಜಿಕ ಭೌಗೋಳಿಕ ವೈಜ್ಞಾನಿಕ ಹಾಗೂ ಇನ್ನಿತರ ಸಮಸ್ಯೆಗಳಿಗೆ ಸಂಶೋಧನೆಯ ಮೂಲಕ ಪರಿಹಾರವನ್ನು ಕಂಡುಕೊಳ್ಳುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳ
ಬೇಕು ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶಕ್ಕೆ ಹಾಗೂ ಜಾಗತಿಕ ಸ್ಪರ್ಧೆಯಲ್ಲಿ ನಾವು ಮುಂಚೂಣಿಯಲ್ಲಿ ನಿಲ್ಲಲು ಸಂಶೋಧನೆಯು ಅತ್ಯಾವಶ್ಯಕ
ವಾಗಿರುತ್ತದೆ ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಸದಾ ಬೆಂಬಲಿಸುತ್ತಿರುವ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹಾಗೂ ಸಂಸ್ಥೆಯ ಸಿಇಓ ಸಿ.ಪಿ.ಶಿವರಾಜು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಸಂದರ್ಭದಲ್ಲಿ ನಿರ್ವಹಣಾ ವಿಭಾಗದ ಮುಖ್ಯಸ್ಥ ಎಚ್.ಚರಣ್‍ರಾಜ್, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಿ.ಇ.ಸುನಿಲ್, ಎಸ್.ತನುಜಾ, ಸಹಾಯಕ ಪ್ರಾಧ್ಯಾಪಕ ಪಲ್ಲವಿ ಸೇರಿದಂತೆ ಹಲವರು ಭಾಗವಹಿಸಿದ್ದರು.