ಸಂಸತ್ತಿನಲ್ಲಿ ಗಲಾಟೆ: ಪ್ರಧಾನಿ ನೇತೃತ್ವದಲ್ಲಿ ಹಿರಿಯ ಸಚಿವರ ಸಭೆ

ನವದೆಹಲಿ,ಮಾ 16 -ಸಂಸತ್ತಿನ‌ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಜಂಟಿ ಸಂಸದೀಯ ಸಮಿತಿ -ಜೆಪಿಸಿ ತನಿಖೆಗೆ ಆಗ್ರಹಿಸಿರುವ ಹಿನ್ನೆಲೆ ಹಾಗು ರಾಹುಲ್ ಗಾಂದಿ ಹೇಳಿಕೆ ಕುರಿತು ಸದನದಲ್ಲಿ ಅನುಸರಿಸಬೇಕಾದ ನಡೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಹಿರಿಯ ಸಚಿವರ ಸಭೆ ನಡೆಸಿದರು.

ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೊಯಲ್,
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಮತ್ತು ರಾಜ್ಯಸಭೆಯು ಸತತ ನಾಲ್ಕನೇ ದಿನ ಆಡಳಿತ ಮತ್ತು ಪ್ರತಿಗಳ ಗಲಾಟೆಯಿಂದ ಕಲಾಪ ನಡೆಯದಂತಾಯಿತು.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಅದಾನಿ-ಹಿಂಡೆನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ತಮ್ಮ ಬೇಡಿಕೆಯನ್ನು ಒತ್ತಾಯಿಸಿವೆ.

ಮತ್ತೊಂದೆ ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ಗಾಂದಿ ಅವರು ಭಾರತದ ಪ್ರಜಾಪ್ರಭುತ್ಬದ ಕುರಿತು ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿವೆ.
ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರ ಜೊತೆ ಸಮಾಲೋಚನೆ ನಡೆಸಿದರು