
ನವದೆಹಲಿ,ಮಾ.೧೭-ದೇಶದ ಪ್ರಜಾಪ್ರಭುತ್ವ ಟೀಕಿಸಿರುವುಕ್ಕೆ ರಾಹುಲ್‌ಗಾಂಧಿ ಕ್ಷಮೆಯಾಚನೆಗೆ ಬಿಜೆಪಿಯ ಬಿಗಿಪಟ್ಟು ಇದಕ್ಕೆ ಪ್ರತಿಯಾಗಿ ಉದ್ಯಮಿ ಅದಾನಿ ಷೇರು ವಂಚನೆ ವಿವಾದಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆಗೆ ವಿಪಕ್ಷಗಳ ಪ್ರತಿಪಟ್ಟಿನಿಂದ ಸಂಸತ್‌ನ ಉಭಯ ಸದನಗಳಲ್ಲಿ ಇಂದೂ ಸಹ ಗದ್ದಲ-ಕೋಲಾಹಲಗಳಿಂದ ಯಾವುದೇ ಕಲಾಪಗಳಿಗೆ ಅವಕಾಶವಾಗದೆ ಗದ್ದಲದಲ್ಲೇ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಲಂಡನ್ ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಕ್ಷಮೆ ಯಾಚಿಸಲು ಬಿಜೆಪಿ ಪಟ್ಟು ಹಿಡಿದಿದ್ದರೆ, ಹಿಂಡನ್‌ಬರ್ಗ್ ವಿಷಯದ ಕುರಿತು ಅದಾನಿ ಪ್ರಕರಣವನ್ಮು ಜಂಟಿ ಸಂಸದೀಯ ಸ್ಥಾಯಿ ಸಮಿತಿ ರಚನೆ ಮಾಡಬೇಕು ಎನ್ನುವ ಪ್ರತಿ ಪಕ್ಷಗಳ ಆಗ್ರಹಕ್ಕೆ ಸಂಸತ್‌ನ ಕಲಾಪಗಳು ಇಂದೂ ಬಲಿಯಾದವು.
ರಾಹುಲ್‌ಗಾಂಧಿ ಮತ್ತು ಗೌತಮ್ ಅದಾನಿ ಪ್ರಕರಣದ ವಿಷಯ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಆರೋಪ ಪ್ರತ್ಯಾರೋಪ, ಗದ್ದಲ ಕೋಲಾಹಲದಿಂದ ವಾರಾಂತ್ಯದ ದಿನವೂ ಉಭಯಸದನಗಳ ಕಲಾಪ ನಡೆಯದೆ ಸೋಮವಾರಕ್ಕೆ ಮುಂದೂಡುವಂತಾಯಿತು.
ಲಂಡನ್‌ನಲ್ಲಿ ರಾಹುಲ್‌ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗದ್ದಲದ ನಡುವೆ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪ ಆಹುತಿಯಾಯಿತು.
ಅದಾನಿ ಷೇರು ವಂಚನೆ ಪ್ರಕರಣವನ್ನು ಜಂಟಿ ಸದನ ಸಮಿತಿ ಮೂಲಕ ತನಿಖೆ ನಡೆಸುವಂತೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದ್ದು ನಾ ಕೊಡೆ ನೀ ಬಿಡೆ ಎನ್ನುವ ಜಟಾಪಟಿಗೆ ಕಾರಣವಾಗಿದೆ.
ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ಬಗ್ಗೆ ನೀಡಿರುವ ಹೇಳಿಕೆಗೆ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ಕ್ಷಮೆಯಾಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು,
ರಾಹುಲ್‌ಗಾಂಧಿ ಕ್ಷಮೆ ಕೇಳಿದರೆ ಮಾತ್ರ ಸದನದಲ್ಲಿ ಹೇಳಿಕೆ ನೀಡಲು ಅವಕಾಶ ನೀಡುವುದಾಗಿ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ಅದಾನಿ ಷೇರು ಅಸ್ತ್ರ ತನಿಖೆಗೆ ಆಗ್ರಹಿಸಿದೆ.
ಮತ್ತೊಂದೆಡೆ ಲೋಕಸಭೆಯಲ್ಲಿ ಮಾತನಾಡಲು ರಾಹುಲ್‌ಗೆ ಅವಕಾಶ ನೀಡುವಂತೆ ಕೋರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅವಕಾಶ ಸಿಕ್ಕಿಲ್ಲ. ಇದು ಕೂಡ ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.
ಇದರಿಂದ ಆರೋಪ ಪ್ರತ್ಯಾರೋಪ ಗದ್ದಲಕ್ಕೆ ವೇದಿಕೆಯಾಗಿ ಕಲಾಪ ಸೋಮವಾರಕ್ಕೆ ಮುಂದೂಡುವಂತಾಯಿತು. ಆಡಳಿತ ಮತ್ತು ಪ್ರತಿ ಪಕ್ಷದ ಸದಸ್ಯರ ಪ್ರತಿಷ್ಟೆಗೆ ಕಲಾಪ ಸತತ ಏದನೇ ದಿನವೂ ಬಲಿಯಾಗಿದೆ
ರಾಹುಲ್ ಗಾಂಧಿ ಸದನದಲ್ಲಿ ಕ್ಷಮೆಯಾಚಿಸದಿದ್ದರೆ ಅವರನ್ನು ಲೋಕಸಭೆಯಿಂದ ಅವರನ್ನು ಅಮಾನತುಗೊಳಿಸಬೇಕು ಎಂದೂ ಎಂದು ಮನವಿ ಮಾಡಿದೆ.
ಲಂಡನ್‌ನಲ್ಲಿ ತಾವು ನೀಡಿರುವ ಹೇಳಿಕೆ ಕುರಿತು ಮಾತನಾಡಲು ಅವಕಾಶ ಮಾಡಿಕೊಡಬೇಕು ಎಂದು
ರಾಹುಲ್ ಗಾಂಧಿ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದಾರೆ.
ಸದನದಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳಲು ಅವಕಾಶ ನೀಡುವಂತೆ ರಾಹುಲ್ ಗಾಂಧಿ ಸ್ಪೀಕರ್ ಅವರಿಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಕ್ಷಮೆ ಯಾಚನೆ ತನಕ ಸದನದಲ್ಲಿ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದ್ದಾರೆ.
ರಾಹುಲ್ ಸದಸ್ಯತ್ವ ರದ್ದತಿಗೆ ಬಿಜೆಪಿ ಆಗ್ರಹ
ಲಂಡನ್‌ನಲ್ಲಿ ಭಾರತದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ರಾಹುಲ್‌ಗಾಂಧಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಈ ಸಂಬಂಧ ಲೋಕಸಭಾಧ್ಯಕ್ಷ ಓಂಬಿರ್ಲಾ ಅವರಿಗೆ ಮನವಿ ಸಲ್ಲಿಸಿರುವ ಬಿಜೆಪಿ, ರಾಹುಲ್‌ಗಾಂಧಿ ನೀಡಿರುವ ಹೇಳಿಕೆ ಭಾರತದ ಪ್ರಜಾಪ್ರಭುತ್ವವನ್ನು ಅವಮಾನಿಸುವಂತಿದೆಯೇ? ಎಂಬುದನ್ನು ಪರಿಶೀಲನೆ ಮಾಡಲು ಕುರಿತು ಆಡಿರುವ ಸಂಸದೀಯ ಸಮಿತಿಯನ್ನು ರಚಿಸಬೇಕು ಎಂದು ಉಲ್ಲೇಖಿಸಿದೆ.
ರಾಹುಲ್ ನೀಡಿರುವ ಹೇಳಿಕೆ ಬಗ್ಗೆ ಸಂಸತ್‌ನಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಲೋಕಸಭೆ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದೆ.
ಬ್ರಿಟನ್‌ನಲ್ಲಿ ನೀಡಿರುವ ಹೇಳಿಕೆ ನಿಂದನೆಯಾಗಿದ್ದು, ಕಲಾಪ ನಿಯಮ ೨೨೩ರ ಅಡಿಯಲ್ಲಿ ಸಂಸದೀಯ ಸಮಿತಿ ರಚನೆ ಮಾಡಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್‌ದುಬೆ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಮೊದಲು ೨೦೦೮ರಲ್ಲಿ ಸದನದಲ್ಲಿ ಕಂತೆ ಕಂತೆ ನೋಟು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಂಸದೀಯ ಸಮಿತಿ ರಚಿಸಲಾಗಿತ್ತು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಮೋದಿ ವಿರುದ್ಧ ಹಕ್ಕುಚ್ಯುತಿ ಮಂಡನೆ
ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿಶೇಷ ಹಕ್ಕುಚ್ಯುತಿ ಮಂಡಿಸಿದ್ದಾರೆ.
ನೆಹರೂ ಅವರ ಉಪನಾಮವನ್ನು ಬಳಸದಿದ್ದಕ್ಕಾಗಿ ಪ್ರಧಾನಿ ಮೋದಿ ಕಳೆದ ತಿಂಗಳು ಗಾಂಧಿ ಕುಟುಂಬದ ಮೇಲೆ ವಾಗ್ದಾಳಿ ನಡೆಸಿದ್ದರು. ಇದೀಗ ಇದೇ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ,ಪ್ರಧಾನಿ ವಿರುದ್ದ ಹಕ್ಕುಚ್ಯುತಿ ಮಂಡಿಸಿದೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿಅವರು, ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಅವರು ನೇತೃತ್ವದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಪದೇ ಪದೇ ಆರ್ಟಿಕಲ್ ೩೫೬ ಅನ್ನು ಬಳಸುತ್ತಿದ್ದಾರೆ ಎಂದು ಟೀಕಿಸಿದ್ಸರು
ಮಾಜಿ ಪ್ರಧಾನಿಗಳಾದ ನೆಹರು ಮತ್ತು ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷಗಳು ಸಂವಿಧಾನದ ೩೫೬ ನೇ ವಿಧಿಯನ್ನು ಕನಿಷ್ಠ ೯೦ ಬಾರಿ ಬಳಸಿ ಅನೇಕ ಪ್ರಾದೇಶಿಕ ಸಂಘಟನೆಗಳ ರಾಜ್ಯ ಸರ್ಕಾರಗಳನ್ನು ಉರುಳಿಸಲು ಬಳಸಿಕೊಂಡಿವೆ ಎಂದು ಅವರು ಒಕ್ಕೂಟದ ವಿಷಯದ ಬಗ್ಗೆ ಕಾಂಗ್ರೆಸ್ ಅನ್ನು ಗುರಿಯಾಗಿಸಿ ಟೀಕೆ ಮಾಡಿದ್ದರು
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಕೆ ಪಿ ವೇಣುಗೋಪಾಲ್ ಅವರು ಪ್ರಧಾನಿ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ