ಸಂಸತ್ ಚುನಾವಣೆಗೆ ಸ್ಪರ್ಧಿಸುವೆ: ಬಯ್ಯಾಪುರ

ಕುಷ್ಟಗಿ:ಸೆ.16:ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಇಂಗಿತ ವ್ಯಕ್ತಪಡಿಸಿದರು.

ಕುಷ್ಟಗಿ ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ 83 ಸಾವಿರ ಮತದಾರರು ಬೆಂಬಲಿಸಿದ್ದಾರೆ. ಅವರೆಲ್ಲರೂ ಅಭಿಮಾನದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.