
ವಾಷಿಂಗ್ಟನ್, ಜ. ೮- ಅಮೇರಿಕಾದ ಸಂಸತ್ ಭವನದ ಮೇಲೆ ಬೆಂಬಲಿಗರು ನಡೆಸಿದ ದಾಂಧಲೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ.
ಅಮೆರಿಕದ ರಾಜಧಾನಿಯಲ್ಲಿ ನಡೆದ ಬೆಂಬಲಿಗರ ದಾಳಿ ಮತ್ತು ಹಿಂಸಾಚಾರ ಸಹಿಸಲಾಗದು ಎಂದು ಹೇಳಿದ್ದಾರೆ.
ಹಿಂಸಾಚಾರವನ್ನು ಯಾರು ಪ್ರೋತ್ಸಾಹಿಸಬಾರದು ಅದನ್ನ ನಾನು ಒಪ್ಪುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ
ಸುಗಮ ಹಸ್ತಾಂತರ:
ಅಮೆರಿಕದ ಚುನಾಯಿತ ಅಧ್ಯಕ್ಷರಾಗಿರುವ ಜೋ ಬೈಡನ್ ಅವರಿಗೆ ಅಧಿಕಾರವನ್ನು ಹಸ್ತಾಂತರ ಮಾಡುವುದಾಗಿ ಟ್ರಂಪ್ ಹೇಳಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಟ್ರಂಪ್ ಅವರು ಸುಗಮ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ತಾವು ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯಿಂದಾಗಿ ಈ ತಿಂಗಳ ಇಪ್ಪತ್ತರಂದು ಅಮೆರಿಕದ ೪೬ ನೇ ಅಧ್ಯಕ್ಷರಾಗಿ ಜೋ ಬೈಡನ್ ಅವರು ಅಧಿಕಾರ ಸ್ವೀಕರಿಸಲು ಇದ್ದ ಅಡ್ಡಿ-ಆತಂಕಗಳು ದೂರವಾಗಿವೆ.
ಕಳೆದ ವರ್ಷ ನವೆಂಬರ್ ೩ರಂದು ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದರು.