ಸಂಸತ್ ಸುಗಮ ಕಲಾಪ; ಸಚಿವರ ಜತೆ ಮೋದಿ ಚರ್ಚೆ

ನವದೆಹಲಿ.ಡಿ.೨- ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ ಗಲಾಟೆ ಎಬ್ಬಿಸುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವುದು, ಪೆಟ್ರೋಲ್ ಡೀಸೆಲ್ ಬೆಲೆ ಗಗನಮುಖಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸೂಕ್ತ ಉತ್ತರ ನೀಡುವ ಸಂಬಂಧ ಪ್ರಧಾನಿ ಅವರು ಹಿರಿಯ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಪ್ರತಿಪಕ್ಷದ ೧೨ ರಾಜ್ಯಸಭಾ ಸದಸ್ಯರನ್ನು ಪ್ರಸಕ್ತ ಅಧಿವೇಶನ ಮುಗಿಯುವ ತನಕ ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ಧರಣಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಯು ಅವರು ಹಿರಿಯ ಸಚಿವರ ಜತೆ ಸಮಾಲೋಚನೆ ನಡೆಸಿದರು.

ಈಗಾಗಲೇ ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದೆ ಕಾಂಗ್ರೆಸ್ ಸೇರಿದಂತೆ ಪ್ರತಿ ಪಕ್ಷಗಳು ಗದ್ದಲ ಗಲಾಟೆ ಹೋರಾಟಕ್ಕೆ ಇರುವ ಸಂಬಂಧ ಅನುಸರಿಸಬೇಕಾದ ತಂತ್ರಗಳ ಕುರಿತು ಹಿರಿಯ ಸಚಿವರಿಂದ ಅಗತ್ಯ ಸಲಹೆ-ಸೂಚನೆ ಪಡೆದಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಕಳೆದ ಒಂದು ವರ್ಷಗಳಿಂದ ರೈತರು ನಡೆಸುತ್ತಿದ್ದ ಹೋರಾಟದ ಹಿನ್ನೆಲೆಯಲ್ಲಿ ಅನ್ನದಾತರ ಬೆದರಿಕೆಗೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಚರ್ಚೆಗೆ ಅವಕಾಶ ಮಾಡಿಕೊಡದೆ ಏಕಾಏಕಿ ಅಧಿಕಾರ ಮಾಡಿದೆ ಈ ವಿಷಯದಲ್ಲಿ ವಿರೋಧ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ವಿರುದ್ಧ ತರಾಟೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ರೈತರ ಹೋರಾಟದ ಸಮಯದಲ್ಲಿ ನೂರಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದರೂ ಇದಕ್ಕೆ ಯಾವುದೇ ಆಧಾರವಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿರುವುದು ಪ್ರತಿಪಕ್ಷಗಳ ಸದಸ್ಯರನ್ನು ಮತ್ತಷ್ಟು ಕೆರಳಿಸುವಂತೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ನಡೆಸುವ ಹೋರಾಟಕ್ಕೆ ಪ್ರತಿ ಹೋರಾಟ ಸೇರಿದಂತೆ ಸೂಕ್ತ ಉತ್ತರ ನೀಡುವ ಸಂಬಂಧ ಪ್ರಧಾನಿಯವರ ಸಭೆ ಮಹತ್ವ ಪಡೆದುಕೊಂಡಿದೆ