ಸಂಸದರಿಂದ ಪರಿಸರ ದಿನಾಚರಣೆಗೆ ಚಾಲನೆ

ದಾವಣಗೆರೆ.ಜೂ.೫; ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ನಗರದ 25ನೇ ವಾರ್ಡ್‌ ಡಿಸಿಎಂ ಟೌನ್ ಶಿಪ್ ನ ವಿವೇಕಾನಂದ ಉದ್ಯಾನವನದಲ್ಲಿ ಸಸಿ ನೆಟ್ಟು, ನೀರು ಹಾಯಿಸುವ ಮೂಲಕ ಸಂಸದ ಜಿ.ಎಂ ಸಿದ್ದೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ. ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಉಮಾ ಪ್ರಕಾಶ್, ಆಯುಕ್ತರಾದ ವಿಶ್ವನಾಥ್ ಮುದಜ್ಜಿ ಮತ್ತು ಇತರರು ಉಪಸ್ಥಿತರಿದ್ದರು.