ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ಚುನಾವಣೆ ಗಿಮಿಕ್:ಸಚಿವ ಎಂ.ಬಿ. ಪಾಟೀಲ

ವಿಜಯಪುರ,ಫೆ. 25:ಸಂಸದ ಅನಂತಕುಮಾರ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ದ ಸಂಸದ ಅನಂತಕುಮಾರ ಹೆಗಡೆ ಟೀಕಿಸಿರುವುದಕ್ಕೆ
ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿರುಗೇಟು ನೀಡಿದರು.
ಅನಂತಕುಮಾರ ಅವರನ್ನು ಹುಚ್ಚರ ಆಸ್ಪತ್ರೆಗೆ ಸೇರಿಸಬೇಕು.
ಇವರು ಐದು ವರ್ಷ ಕಾಣೆಯಾಗಿದ್ದರು.
ಎಲ್ಲಿಯೂ ಇರಲಿಲ್ಲ. ಮತದಾರರಿಗೆ ಮುಖ ತೋರಿಸಿರಲಿಲ್ಲ.
ಚುನಾವಣೆ ಬಂದ ಕಾರಣ ಹಿಂದೂ ಮುಸ್ಲಿಂ ಹೇಳಿಕೆ ಕೊಡುವ ಮೂಲಕ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಬಯಸಿದ್ದಾರೆ.
ಹಿಂದೆ ಸಂವಿಧಾನ ತಿರುಚಬೇಕೆಂದು ಹೇಳಿದ್ದರು.
ಇಂಥವರ ಬಗ್ಗೆ ಬಹಳ ಮಾತನಾಡುವ ಅವಶ್ಯಕತೆಯಿಲ್ಲ.
ಇದನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ.
ಇದು ಚುನಾವಣೆ ಗಿಮಿಕ್ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.