ಸಂಸದ ಜಿಗಜಿಣಗಿಗೆ ಎದೆ ನೋವು, ಚೇತರಿಕೆ

ವಿಜಯಪುರ,ಜ.29:ಅನಾರೋಗ್ಯ ನಿಮಿತ್ತ ಬಾಗಲಕೋಟೆ ಆಸ್ಪತ್ರೆಗೆ ದಾಖಲಾಗಿದ್ದ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ಚೇತರಿಸಿಕೊಂಡಿದ್ದಾರೆ.

ಭಾನುವಾರ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಸಂಸದ ರಮೇಶ ಜಿಗಜಿಣಗಿ ಆವರಿಗೆ ಮಾರ್ಗ ಮಧ್ಯೆದಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಬಳಿ ಹಠಾತ್ತನೆ ಎದೆ ನೋವು ಕಾಣಿಸಿಕೊಂಡು ತೀವ್ರವಾಗಿ ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಿದ್ದು, ಚೇತರಿಸಿಕೊಂಡಿದ್ದಾರೆ ಎಂದು ಆಸ್ಪ್ರತೆ ಮೂಲಗಳು ತಿಳಿಸಿವೆ