ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹ

ಹಗರಿಬೊಮ್ಮನಹಳ್ಳಿ,ಮೇ.೧೯- ಇಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ. ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂದನಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಒಲಂಪಿಕ್ ಪದಕ ವಿಜೇತರು ವಿಶ್ವ ಚಾಂಪಿಯನ್ ಕುಸ್ತಿಪಟುಗಳ ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು ೨೦೨೩ ಏಪ್ರಿಲ್ ೨೪ ರಿಂದ ನವ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸರ್ದಾರ್ ಹುಲಿಗಮ್ಮ (ವಿನೋದ) ತಿಳಿಸಿದರು.
ಬೇಟಿ ಬಚಾವ್ ಬೇಟಿ ಪಡಾವೋ ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದರನ್ನ ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಮಾಡಿದ್ದಾರೆ ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಎಂದು ಹಗರಿಬೊಮ್ಮನಹಳ್ಳಿ ತಾಹಸಿಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕ ಕಾರ್ಯದರ್ಶಿ ಸರ್ದಾರ್ ಹುಲಿಗಮ್ಮ (ವಿನೋದ), ಕೂಡ್ಲಿಗಿ ತಾಲೂಕು ಅಧ್ಯಕ್ಷರು ಲಕ್ಷ್ಮಿ ದೇವಿ, ಕಾರ್ಯದರ್ಶಿ ಭಾಗ್ಯ, ಮುಖಂಡರಾದ ಗೌರಮ್ಮ, ರೇಖಾ, ಮಮ್ತಾಜ್, ಪ್ರಾಂತ ರೈತ ಸಂಘಟನೆಯ ಕೋಟಿಗೆ ಮಲ್ಲಿಕಾರ್ಜುನ್, ಆನಂದಪ್ಪ, ಮೈಲಪ್ಪ, ಲಕ್ಷ್ಮಪ್ಪ, ಕರಿಬಸಪ್ಪ, ವೀರಣ್ಣ, ಕಲ್ಮನಿ, ಪ್ರಶಾಂತ್, ಜಯಸೂರ್ಯ ಭಾಗವಹಿಸಿದ್ದರು.