ಸಂಸದ ವಿ.ಶ್ರೀನಿವಾಸ ಪ್ರಸಾದ್ ಈಗ ಕಾಂಗ್ರೆಸ್‍ನಲ್ಲಿದ್ದಾರೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.08:- ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಬಿಜೆಪಿಯಲ್ಲಿಲ್ಲ, ಅವರು ಈಗ ಕಾಂಗ್ರೆಸ್‍ನಲ್ಲಿದ್ದಾರೆ ಎಂದು ಎಂಎಸ್‍ಐಎಲ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಸಂಸದರು ಆಗಹೋಗಬೇಕಿತ್ತು, ಹೋಗಿದ್ದರು. ಆದರೆ, ಅವರಿಗೆ ಬಿಜೆಪಿ ಸಿದ್ಧಾಂತ ಹಿಡಿಸಿಲ್ಲ. ಆದರೆ, ಖಂಡಿತವಾಗಿಯೂ ಈಗ ಪ್ರಸಾದ್ ಅವರು ಬಿಜೆಪಿಯಲ್ಲಿಲ್ಲ ಎಂದರು.
ಸಂಸದರ ಬಹುಪಾಲು ಬೆಂಬಲಿಗರು ಕಾಂಗ್ರೆಸ್‍ಗೆ ಬಂದಿದ್ದಾರೆ. ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಿಮತ ಕೇಳುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ 12ರಂದು ಕೊಳ್ಳೇಗಾಲಕ್ಕೆ ಭೇಟಿ ನೀಡಲಿದ್ದಾರೆ. ಗುಂಡ್ಲುಪೇಟೆಯಲ್ಲೂ ಸಮಾವೇಶ ನಡೆಸುವ ಸಾಧ್ಯತೆ ಇದೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಕೆ. ರವಿಕುಮಾರ್, ಮಹಮದ್ ಅಸ್ಗರ್ ಮುನ್ನಾ ಇತರರು ಇದ್ದರು.