ಸಂಸದ ಹೆಗಡೆ ಹೇಳಿಕೆಗೆ ಧರ್ಮಸೇನಾ ಕಿಡಿ

ಬೆಂಗಳೂರು, ಮಾ. ೧೨- ಸಂವಿಧಾನ ಬದಲಾವಣೆ ಮಾಡುವ ಹೇಳಿಕೆಯನ್ನು ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗೆಡೆ ವಿರುದ್ಧ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಅನಂತಕುಮಾರ್ ಹೆಗೆಡೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಸಂವಿಧಾನ ಬದಲಾವಣೆ ಬಗ್ಗೆ ಪದೇ ಪದೇ ಇಂತಹ ಹೇಳಿಕೆ ನೀಡುತ್ತಿರುವ ಅವರನ್ನು ಸಂಸತ್ತಿನಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರುಗಳಾದ ಕನಿರಾಮ್ ರಾಥೋಡ್, ಶ್ರೀಧರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಕೋಗಿಲು ವೆಂಕಟೇಶ್, ರಾಜ್ಯ ಪದಾಧಿಕಾರಿಗಳಾದ ವೈಶಾಖ, ನೇಮಿರಾಜ್ ಮತ್ತು ಅಶೋಕ್ ಸಾಲಪ್ಪ ಅವರು ಉಪಸ್ಥಿತರಿದ್ದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನಾ, ಉಪಾಧ್ಯಕ್ಷರುಗಳಾದ ಕನಿರಾಂ ರಾಥೋಡ್, ಶ್ರೀಧರ್, ಬೆಂ. ಉತ್ತರ ಜಿಲ್ಲಾ ಅಧ್ಯಕ್ಷ ಕೋಗಿಲು ವೆಂಕಟೇಶ್, ಅಶೋಕ್ ಸಾಲಪ್ಪ ಇದ್ದಾರೆ.