ಸಕಾಲ ಯೋಜನೆಯಡಿ ಹಿರಿಯ ನಾಗರೀಕರಿಗೆ ಗುರುತಿನ ಚೀಟಿ

ದಾವಣಗೆರೆ ಡಿ.೨೦; ಡಿ.17 ರಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಾವಣಗೆರೆ ವತಿಯಿಂದ ಸಕಾಲ ಸಪ್ತಾಹದ ಅಂಗವಾಗಿ ಆನ್‌ಲೈನ್ ಮೂಲಕ ಸೇವಾ ಸಿಂಧು ಕೇಂದ್ರಗಳಲ್ಲಿ  ಅರ್ಜಿ ಸಲ್ಲಿಸಿ ಸಕಾಲ ಯೋಜನೆ ಅಡಿಯಲ್ಲಿ ಹಿರಿಯ ನಾಗರೀಕರಿಗೆ ಗುರುತಿನ ಚೀಟಿ ಸೌಲಭ್ಯ ಒದಗಿಸುವ ಬಗ್ಗೆ ಇಂದು ಜಾಗೃತಿ ಮೂಡಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿಯ ರಮ್ಯ ಹಾಜರಿದ್ದರು.