ಸಕ್ಕರೆ ಕಾರ್ಖಾನೆಯ ಹೊಗೆ ಬೂದಿ ನಿಯಂತ್ರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ದಾವಣಗೆರೆ. ಮಾ.೭; ಕುಕ್ಕವಾಡದಲ್ಲಿ ಸಕ್ಕರೆ ಕಾರ್ಖಾನೆ ಚಿಮಣಿಯಿಂದ ಹೊರ ಸೂಸುವ ಹೊಗೆಯ ಬೂದಿಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ರೈತ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕುಕ್ಕುವಾಡ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆಯಿಂದ  ಪರಿಸರ ಹಾನಿ ಮತ್ತು ಕಬ್ಬು ಬೆಳೆದಿರುವ ರೈತರಿಗೆ  ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸಕ್ಕರೆ ಕಾರ್ಖಾನೆಯ ತ್ಯಾಜ್ಯ ನೀರನ್ನು ಹಳ್ಳಕ್ಕೆ ಬಿಡಲಾರದು, ಕಾರ್ಖಾನೆ ಆವರಣದಲ್ಲಿ ಇದನ್ನು ಸಂಗ್ರಹಿಸಿ, ಸಂಸ್ಕರಿಸಬೇಕು., ಕಬ್ಬು ಕಟಾವು ಮಾಡಲು ನಿಗದಿತ ಸಮಯದಲ್ಲಿ ಪರ್ಮಿಟ್ ಕೊಡುತ್ತಿಲ್ಲ. ಇದರಿಂದ ಕಬ್ಬಿನ ತೂಕ ಕಡಿಮೆಯಾಗಿ, ರೈತನಿಗೆಅನ್ಯಾಯವಾಗುತ್ತಿದೆ. ಆದ್ದರಿಂದ ಕಬ್ಬು ನಾಟಿ ಮಾಡಿದ 10 ಅಂದ 11 ತಿಂಗಳೊಳಗೆ ಪರ್ಮಿಟ್ ಕೊಡಬೇಕು. ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಸಾಗಿಸುವ ಕಾರ್ಮಿಕರ ಕೂಲಿವೆಚ್ಚ ಹೆಚ್ಚಳವಾಗಿದೆ. ಕಬ್ಬಿನ ಬೆಲೆಯ ಅರ್ಧದಷ್ಟು ಆಗಿದೆ. ಇದರಿಂದ ಕಬ್ಬು ಬೆಳೆದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಆದ್ದರಿಂದ ಯಂತ್ರಗಳ ಮೂಲಕ ಕಬ್ಬು ಕಟಾವು ಮಾಡಿ, ಕಾರ್ಖಾನೆಗೆ ಸಾಗಿಸುವ ಜವಾಬ್ದಾರಿಯನ್ನು ಉರ್ಖಾನೆಯದರೆ ವಹಿಸಿಕೊಳ್ಳಬೇಕು. ಕಬ್ಬಿನ ಟನ್ ಒಂದಕ್ಕೆ ರೂ. 3100.00 ಕೊಡಬೇಕು ಎಂದು ರಾಜ್ಯ ಸರ್ಕಾರ ನಿಗದಿ ಪಡಿಸಿದೆ ಆದರೆ ಈ ಕಾರ್ಖಾನೆಯಲ್ಲಿ ಟನ್ ಒಂದಕ್ಕೆ ರೂ.2821:00 ಮಾತ್ರ ಕೊಡಲಾಗುತ್ತಿದೆ. ಇದು ಟನ್‌ಗೆ 200 ರೂಪಾಯಿ ಕಡಿಮೆಯಾಗುತ್ತದೆ. ಇದರಿಂದ ರೈತರಿಗೆ ಬಹಳ ಅನ್ಯಾಯವಾಗುತ್ತಿದೆ. ಸಕ್ಕರೆ ಕಾರ್ಖಾನೆಯವರು ವಿದ್ಯುತ್‌ ಅವಘಡಗಳಿಂದ ಕಬ್ಬಿನ ಹೊಲಕ್ಕೆ ಬೆಂಕಿ ಬಿದ್ದು ಸುಟ್ಟಿರುವ ಕಬ್ಬನ್ನು ಖರೀದಿಸುವಾಗ ತೂಕದಲ್ಲಿ ಟನ್ ಒಂದಕ್ಕೆ 250 ಕೆ.ಜಿ ಕಡಿತಗೊಳಿಸಿ, ಲೆಕ್ಕ ಮಾಡುತ್ತಾರೆ. ಇದು ಬೆಂಕಿಗೆ ಆಹುತಿಯಾದ ಬೆಳೆಯಿಂದ ತೀವ್ರ ನಷ್ಟ ಅನುಭವಿಸಿದ ರೈತನ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದ್ದರಿಂದ ಸುಟ್ಟ ಕಬ್ಬಿನ ಸೈದ ತೂಕ ಪರಿಗಣಿಸಿ ಲೆಕ್ಕ ಮಾಡಿ, ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕುಕ್ಕವಾಡ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.