ಸಕ್ಕರೆ ನಾಡಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ,ಜ8: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಆಯೋಜನೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದರು.

ಇಂದಿಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಅವರು ಈ ವಿಷಯ ಪ್ರಸ್ತಾಪಿಸಿದರು. ನಮ್ಮ ಜಿಲ್ಲೆಯಲ್ಲಿ ಮುಂದಿನ ಸಮ್ಮೇಳನ ಸಂಘಟಿಸಬೇಕೆಂದು 9 ಜಿಲ್ಲೆಯವರು ಹಕ್ಕು ಮಂಡಿಸಿದ್ದರು. ಹೆಚ್ಚಿನವರು ಮಂಡ್ಯ ಜಿಲ್ಲೆಯಲ್ಲಿಯೇ ಸಾಹಿತ್ಯ ಸಮ್ಮೇಳನ ಮಾಡಬೇಕೆಂದು ಹೇಳಿದ್ದರು. ಆದ್ದರಿಂದ ಈ ನಿರ್ಧಾರ ಕೈಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.