ಸಕ್ರಿಯ ಪ್ರಕರಣ ಕುಸಿತ

ನವದೆಹಲಿ, ಜೂ.೮- ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನ ಎರಡನೇ ಅಲೆ ಆರ್ಭಟಿಸಿದ ಬಳಿಕ ಗಣನೀಯವಾಗಿ ಇಳಿಕೆ ಆಗುತ್ತಿದ್ದು ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಒಂದು ಲಕ್ಷಕ್ಕೂ ಕಡಿಮೆ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿದೆ.
ಹೊಸ ಸೋಂಕು ಪ್ರಕರಣಗಳಿಗೆ ಹೋಲಿಸಿದರೆ ಇಂದು ೯೭ ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಇದರಿಂದಾಗಿ ಸಂಖ್ಯೆ ನಿತ್ಯ ಸೋಂಕು ಮತ್ತು ಸಕ್ರಿಯ ಪ್ರಕರಣ ಕುಸಿಯುತ್ತಿದೆ. ಹೀಗಾಗಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಬರೋಬ್ಬರಿ ೬೩ ದಿನಗಳ ಬಳಿಕ ದೇಶದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.೪.೬೨ ರಷ್ಟು ದಾಖಲಾಗಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ
ಇಂದು ೮೬,೪೯೮ ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ೨೧೨೩ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಪ್ರತಿನಿತ್ಯ ಸಾವನ್ನಪ್ಪುತ್ತಿರುವರ ಸಂಖ್ಯೆಯೂ ಇಳಿಮುಖ ಕಂಡಿದೆ.
ಕಳೆದ ೨೪ ಗಂಟೆಗಳಲ್ಲಿ ೧,೮೨,೨೮೨ ಸೋಂಕಿತರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ
ಇಂದು ಬೆಳಗ್ಗೆ ೮ ಗಂಟೆ ತನಕ ಹೊಸದಾಗಿ ದಾಖಲಾಗಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯತನಕ ಒಟ್ಟಾರೆಯಾಗಿ ದೇಶದಲ್ಲಿ ೨,೮೯,೯೬,೪೭೩ ಮಂದಿಗೆ ಸೋಂಕು ಏರಿಕೆಯಾಗಿದೆ ಜೊತೆಗೆ ೨,೭೩,೪೧,೪೬೨ ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ದೇಶದಲ್ಲಿ ಇಲ್ಲಿಯವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ೩,೫೧,೩೦೯ ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ

ಸಕ್ರಿಯ ಪ್ರಕರಣ ಕುಸಿತ:

ದೇಶದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳು ಕುಸಿತ ಕಂಡಿದೆ

ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪ್ರತಿದಿನ ಸರಾಸರಿ ಒಂದು ಲಕ್ಷ ಆಜುಬಾಜಿನಲ್ಲಿ ಸಕ್ರಿಯ ಪ್ರಕಣಗಳು ನಿತ್ಯ ಕಡಿಮೆಯಾಗುತ್ತಿವೆ ಹೀಗಾಗಿ ಸದ್ಯ ದೇಶದಲ್ಲಿ ೧೩,೦೩,೭೦೨ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ

೨೩.೬೧ಕೋಟಿಗೆ ಲಸಿಕೆ:

ದೇಶದಲ್ಲಿ ಇದುವರೆಗೂ ಬರೋಬ್ಬರಿ ೨೩ ಕೋಟಿಗೂ ಅಧಿಕ ಮಂದಿಗೆ ಕೋರೊನಾ ಸೋಂಕಿನ ಲಸಿಕೆ ಹಾಕಲಾಗಿದೆ
ನಿನ್ನೆ ಸಂಜೆ ತನಕ ೨೩,೬೧,೯೮,೭೨೬ ಮಂದಿ?ಗೆಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ಮಾಹಿತಿಯಲ್ಲಿ ತಿಳಿಸಿದೆ

ಗಣನೀಯ ಕುಸಿತ

ದೇಶದಲ್ಲಿ ಪ್ರತಿನಿತ್ಯ ಅತಿ ಹೆಚ್ಚು ಸೋಂಕು ಮತ್ತು ಸಾವು ದಾಖಲಾಗುತ್ತಿದ್ದ ಮಹಾರಾಷ್ಟ್ರ ದೆಹಲಿ, ಕರ್ನಾಟಕ ತಮಿಳುನಾಡು ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಲ್ಲಿ ಸೋಂಕು ಮತ್ತು ಸಂಖ್ಯೆ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿದೆ.

ದೇಶದಲ್ಲಿ ಪಾಸಿಟಿವಿಟಿ ಪ್ರಮಾಣ ಶೇಕಡಾ ೧೫ರಿಂದ ಇದೀಗ ಶೇಕಡ ಹತ್ತಕ್ಕೂ ಕಡಿಮೆ ಕುಸಿದಿದೆ ಇದು ಆಶಾದಾಯಕ ಬೆಳವಣಿಗೆಯಾಗಿದೆ. ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಸಡಿಲಮಾಡಿ ವಿವಿಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ