ಸಚಿನ್‌ಗೆ ಕೊರೊನಾ ಸೋಂಕು ದೃಢ

ಮುಂಬೈ,ಮಾ.೨೭- ಕ್ರಿಕೆಟ್ ಲೋಕದ ದಂತಕತೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕು ದೃಢಪಟ್ಟಿರುವ ವಿಷಯವನ್ನು ಟ್ವಿಟ್ಟರ್‌ನಲ್ಲಿ ಖಚಿತಪಡಿಸಿರುವ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಂಪರ್ಕಕಕ್ಕೆ ಬಂದಿರುವ ಎಲ್ಲರೂ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದಾಗ ಸೋಂಕಿರುವುದು ಧೃಡಪಟ್ಟಿದೆ. ಹೀಗಾಗಿ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿನ ಲಘು ಲಕ್ಷಣಗಳು ಕಂಡು ಬಂದಿವೆ, ಆರೋಗ್ಯವಾಗಿದ್ದೇನೆ. ಅಭಿಮಾನಿಗಳು, ಸ್ನೇಹಿತರು ಆತಂಕಪಡುವ ಅಗತ್ಯವಿಲ್ಲ ಎಂದು ಕೂಡ ಅವರು ತಿಳಿಸಿದ್ದಾರೆ.
ನೆಗೆಟೀವ್:
ಕುಟುಂಬದ ಇತರ ಸದಸ್ಯರು ಕೂಡ ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದು ಅವರೆಲ್ಲರಿಗೂ ನೆಗೆಟಿವ್ ವರದಿ ಬಂದಿದೆ ಎಂದು ಅವರು ತಿಳಿಸಿದರು.