ಸಚಿವದ್ವಯರಿಂದ ಆಸ್ಪತ್ರೆಗಳ ಪರ್ಯಟನೆ

ಮೈಸೂರು. ಏ.22: ಮೈಸೂರಿನಲ್ಲಿಂದು ಸಚಿವದ್ವಯರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಒಂದು ಸುತ್ತು ಆಸ್ಪತ್ರೆಗಳ ಪರ್ಯಟನೆ ನಡೆಸಿದರು.
ಮೈಸೂರಿನಲ್ಲಿಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಮೇಟಗಳ್ಳಿಯ ಜಿಲ್ಲಾ ಕೋವಿಡ್ ಆಸ್ಪತ್ರೆ, ಟ್ರಾಮಾ ಸೆಂಟರ್‍ನಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್, ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಆಸ್ಪತ್ರೆಗಳ ಮೂಲಸೌಕರ್ಯ, ಸಾಮಥ್ರ್ಯ ಹೆಚ್ಚಿಸಲು ಸೂಚನೆ ನೀಡಿದರು. ಏತನ್ಮಧ್ಯೆ ಕೋವಿಡ್ ನಿಯಂತ್ರಣಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲಂಬಿಯಾ, ನಾರಾಯಣ ಹೃದಯಾಲಯಕ್ಕೂ ಸಚಿವರು ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಈ ಸಂದರ್ಭ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.