ಸಚಿವರಿಂದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ

ದಾವಣಗೆರೆ,ಜ.೧೧- ನಗರ ಪಾಲಿಕೆ ವ್ಯಾಪ್ತಿಯ ಮುಡಾ, ಒಳಚರಂಡಿ ಸೇರಿದಂತೆ ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ವೀಕ್ಷಿಸಿದರು.
ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿ ನಗರಾಭಿವೃದ್ಧಿ ಪ್ರಾಧಿಕಾರ ಕರ್ನಾಟಕನಗರ ಮೂಲ ಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿಗಳನ್ನು ಖುದ್ದು ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬನಶಂಕರಿ ಪಾರ್ಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಜಿಮ್ ಪರಿಕರಗಳನ್ನು ವೀಕ್ಷಿಸಿ ಅಲ್ಲೇ ವರ್ಕ್‌ಔಟ್ ಮಾಡುವ ಮೂಲಕ ಗಮನ ಸೆಳೆದರು.
ಈ ಸಂದರ್ಭದಲ್ಲಿ ಸಂಸದ ಸಿದ್ದೇಶ್ವರ್, ಶಾಸಕ ಎಸ್.ಎ ರವೀಂದ್ರನಾಥ್, ಮೇಯರ್ ಅಜಯ್‌ಕುಮಾರ್ ಹಾಗೂ ಪಾಲಿಕೆ ಆಯುಕ್ತರು ಉಪಸ್ಥಿತರಿದ್ದರು.