ಸಚಿವರಿಂದ ಐಐಟಿ ಕಟ್ಟಡ ಕಾಮಗಾರಿ ವೀಕ್ಷಣೆ

ಧಾರವಾಡ,ಸೆ.2: ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಅವರು ಧಾರವಾಡ ಐಐಟಿ ಕ್ಯಾಂಪಸ್‍ಗೆ ಭೇಟಿ ನೀಡಿ, ಕಾಲೇಜು, ವಿದ್ಯಾರ್ಥಿ ವಸತಿ ನಿಲಯ ಮತ್ತು ಆಡಳಿತ ಕಟ್ಟಡಗಳ ಕಾಮಗಾರಿ ವೀಕ್ಷಿಸಿದರು.

ಐಐಟಿ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಉದ್ದೇಶಿಸಿ, ಸ್ಥಳದಲ್ಲಿ ಮಾತನಾಡಿದ ಅವರು, ಐಐಟಿ ಕಟ್ಟಡ ಕಾಮಗಾರಿ ಯೋಜನೆಯಂತೆ ಕಳೆದ ಮಾರ್ಚ 2022 ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಸ್ವಲ್ಪಮಟ್ಟಿಗೆ ವಿಳಂಬವಾಗಿದೆ. ಬರುವ ನವೆಂಬರ್ ತಿಂಗಳಲ್ಲಿ ಐಐಟಿ ಕಾಲೇಜು ಕಟ್ಟಡ ಉದ್ಘಾಟನೆಗೆ ಯೋಜಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಬೇಗ ಪೂರ್ಣಗೊಳಿಸಬೇಕು ಎಂದು ಹೇಳಿದರು. ಈ ಕುರಿತು ಐಐಟಿ ಅಧಿಕಾರಿಗಳು ಹೆಚ್ಚು ಕಾಳಜಿವಹಿಸಬೇಕೆಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರದಾಮಗಳ ಅಧ್ಯಕ್ಷ ರಾಜು ಕೊಟೆನ್ನವರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲೊಕೇಶ ಜಗಲಾಸರ್, ಐಐಟಿ ಕುಲಸಚಿವ ಡಾ.ಬಸವರಾಜಪ್ಪ, ಡಿವೈಎಸ್‍ಪಿ ಎಮ್.ಬಿ.ಸಂಕದ, ಧಾರವಾಡ ತಹಸಿಲ್ದಾರ ಸಂತೋಷ ಹಿರೇಮಠ ಸೇರಿದಂತೆ ವಿವಿಧ ಅಧಿಕಾರಿಗಳು, ಐಐಟಿ ಪ್ರಾಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.