ಸಚಿವರಿಂದ ಮಲೆಮಹದೇಶ್ವರನಿಗೆ ವಿಶೇಷ ಪೂಜೆ

ಹನೂರು:ಏ.19: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಬಂಗಾರ ರಥೋತ್ಸವದಲ್ಲಿ ಪಾಲ್ಗೊಂಡರು.
ಭಾನುವಾರ ಸಂಜೆ ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಬಂಗಾರದ ರಥೋತ್ಸವದಲ್ಲಿ ಪಾಲ್ಗೊಂಡರು ಇವರಿಗೆ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್ ಮಹೇಶ್ ಸಾಥ್ ನೀಡಿದರು. ಪೂಜೆ ಸಲ್ಲಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಮಲೆಮಹದೇಶ್ವರ ಬೆಟ್ಟದ ಪ್ರವಾಸಿಮಂದಿರದಲ್ಲಿ ಚಾಮರಾಜನಗರ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ, ಎನ್.ಮಹೇಶ್, ಪ್ರಾಧಿಕಾರದ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಇನ್ನಿತರರು ಇದ್ದರು.