ಸಚಿವರಿಗೆ ಅಭಿನಂದನೆ

ಹುಬ್ಬಳ್ಳಿ ನ 2 : ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಇವರು ಕೋವಿಡ-19 ನಿಂದ ಗುಣಮುಖರಾಗಿ ಮತ್ತೆ ಸಾರ್ವಜನಿಕ ಸೇವೆಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದನ್ನು ಸ್ವಾಗತಿಸಿ, ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಲ್ಹಾದ್ ಜೋಶಿ ಅವರು ಎಸ್ ಎಸ್ ಕೆ ಸಮಾಜ ಬಾಂಧವರು ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ತಮ್ಮ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿರುವದಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ಡಿ, ಕೆ. ಚವ್ಹಾಣ, ಎಸ್ ಎಸ್ ಕೆ ಸಮಾಜದ ಟ್ರಸ್ಟಿ ಭಾಸ್ಕರ ಎನ್ ಜಿತೂರಿ ಶ ಸುರೇಶ್ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.