ಸಚಿವರ ವಿರುದ್ದು ದೂರು-ವರದಿ ನಂತರ ಚರ್ಚೆ

ಬೆಂಗಳೂರು,ಆ೮: ಸಚಿವರ ವಿರುದ್ಧದ ದೂರಿನ ಪತ್ರದ ಬಗ್ಗೆ ಮಂಡ್ಯ ಜಿಲ್ಲೆಯ ಎಸ್‌ಪಿ ಜೊತೆ ಮಾತನಾಡಿ ವರದಿ ತರಿಸಿ ಕೊಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬರೆದಿರುವ ಪತ್ರ ನಕಲಿ ಇದೆ. ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತನಾಡಿ ನಾನು ವರದಿ ತರಿಸಿ ಕೊಡುತ್ತೇನೆ. ವರದಿ ಬಂದ ನಂತರ ಸಿಎಂ ಜೊತೆಗೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು ನಕಲಿ ಪತ್ರ ಹೆಚ್ಚಾಗಿರುವ ಈ ಹಿನ್ನೆಲೆಯಲ್ಲಿ ಐಟಿ, ಗೃಹ ಇಲಾಖೆ ಕಠಿಣ ಕಾನೂನು ತರುವ ಬಗ್ಗೆ ಚರ್ಚೆ ನಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಸೈಬರ್ ಕ್ರೈಂನವರು ಪತ್ರ ಬರೆದಿರುವವರು ಯಾರು ಎಂದು ಶೋಧ ಆರಂಭಿಸಿದ್ದಾರೆ. ಸಚಿವ ಚಲುವರಾಯಸ್ವಾಮಿ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದು, ಅದರ ಆಧಾರದಲ್ಲಿ ರಾಜ್ಯಪಾಲರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪರಿಶೀಲಿಸುವಂತೆ ಸೂಚಿಸಿರುವ ಪತ್ರದ ಪ್ರತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದು ನಕಲಿ ಎಂಬುದಾಗಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಹೇಳಿದ್ದರು.ಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾg