ಸಚಿವ ಉಮೇಶ್ ಕತ್ತಿ ವಿಧಿವಶ

ಬೆಂಗಳೂರು, ಸೆ.6- ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.

ನಗರದ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಇವರು 1961ರ ಮಾ. 14ರಂದು ಜನಿಸಿದ್ದರು. ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಆಹಾರ ಹಾಗೂ ಅರಣ್ಯ ಖಾತೆಯನ್ನು ನಿರ್ವಹಿಸುತ್ತಿದ್ದರು.

ಹುಕ್ಕೇರಿ ಶಾಸಕರಾಗಿದ್ದ ತಂದೆ ವಿಶ್ವನಾಥ್‌ ಕತ್ತಿ ಅಕಾಲಿಕ ನಿಧನದ ಬಳಿಕ 1985ರಲ್ಲಿ ರಾಜಕಾರಣ ಪ್ರವೇಶಿಸಿದ್ದ ಉಮೇಶ್‌ ಕತ್ತಿ. 8 ಬಾರಿ ಶಾಸಕರಾಗಿದ್ದಾರೆ.