
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೭: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ೫೬ ನೇ ಜನ್ಮದಿನ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಕೆ. ಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.೨೨ ರಂದು ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬವಿದ್ದು, ಈ ಪ್ರಯುಕ್ತ ಸೆ.೧೫ ರಿಂದ ಸೆ. ೨೨ ರವರೆಗೆ ಅನೇಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಅನಾಥಾಶ್ರಮದ ಮಕ್ಕಳಿಗೆ , ವೃದ್ಧಾಶ್ರಮ ವಾಸಿಗಳಿಗೆ ಹಾಗೂ ವಿಕಲಚೇತನ ಮಕ್ಕಳಿಗೆ ಅಗತ್ಯವಿರುವ ಪರಿಕರಗಳನ್ನು ವಿತರಿಸಲಾಗುವುದು. ಗೋ ಶಾಲೆಯ ಗೋವುಗಳಿಗೆ ಮೇವು ವಿತರಣೆ, ನಿರಾಶ್ರಿತರ ಕೇಂದ್ರಗಳಲ್ಲಿ ಅನ್ನಸಂತರ್ಪಣೆ, ರಕ್ತದಾನ ಶಿಬಿರ, ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.ಕಾಂಗ್ರೆಸ್ ಪಕ್ಷದಿಂದ ಮಾತ್ರವಲ್ಲದೆ ದಾವಣಗೆರೆ ನಗರ ಹಾಗೂ ಉತ್ತರ ವಿಧಾನ ಸಭಾ ಕ್ಷೇತ್ರದ. ವ್ಯಾಪ್ತಿಯಲ್ಲಿ ಎಸ್ಸೆಸ್ಸೆಂ ಅಭಿಮಾನಿಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ, ಅನಿತಾ ಬಾಯಿ ಮಾಲತೇಶ್, ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ರಾಜೇಶ್ವರಿ, ಡೋಲಿ ಚಂದ್ರು, ಶ್ರೀಕಾಂತ್ ಬಗೇರಾ, ಹರೀಶ್ ಬಸಾಪುರ ಉಪಸ್ಥಿತರಿದ್ದರು.