ಸಚಿವ ಕೆ.ಎಸ್. ಈಶ್ವರಪ್ಪಗೆ ಕೊರೊನಾ

ಶಿವಮೊಗ್ಗ,ಸೆ.1-ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಚಿವ‌ ಈಶ್ವರಪ್ಪ‌ ಅವರ ಮನೆಯ ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರು ಸೇರಿದಂತೆ ಕುಟುಂಬದವರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಹಿಂದೆ ನಡೆಸಿದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು ಈ ಬಾರಿ ಪಾಸಿಟಿವ್ ಬಂದಿದೆ ಎಂದು ಸಚಿವರು ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಸಚಿವರು ತಿಳಿಸಿದ್ದಾರೆ.