ಸಚಿವ ಕೆ.ಹೆಚ್ ಮುನಿಯಪ್ಪಗೆಸನ್ಮಾನ

ಕೋಲಾರ,ಜೂ,9:ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಸಮಿತಿವತಿಯಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಅಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವರಾದ ಕೆ.ಹೆಚ್.ಮುನಿಯಪ್ಪ ರವನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.
ಸಮುದಾಯದ ಮುಖಂಡರು ಮಾತನಾಡಿ ತಮ್ಮ ಜನಾಂಗವನ್ನು ರಾಜಕೀಯವಾಗಿ ಗುರ್ತಿಸುವುದರ ಜೊತೆಗೆ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು ಎಲ್ಲಾ ಸಂದರ್ಭದಲ್ಲೂ ನಿಮ್ಮ ಜೊತೆಯಲ್ಲಿದ್ದ ಸಮುದಾಯದ ಮುಖಂಡರಿಗೆ ಸೂಕ್ತ ಸ್ಥಾನಮಾನಗಳನ್ನು ಒದಗಿಸಿಕೊಡಬೇಕು ಮನವಿ ಮಾಡಿದರು.
ಕೋಲಾರ ಜಿಲ್ಲಾ ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ಜಿಲ್ಲಾಧ್ಯಕ್ಷ ಎಸ್.ಎಂ.ನಾಗರಾಜ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ನರಸಿಂಹಯ್ಯ, ತಾಲೂಕು ಅಧ್ಯಕ್ಷ ಆನಂದ್‌ಕುಮಾರ್, ಐತರಾಸನನಹಳ್ಳಿ ನರಸಿಂಹಪ್ಪ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಯುವ ಸಂಘಟನಾ ಕಾರ್ಯದರ್ಶಿ ಬೆಳ್ಳೂರು ತಿರುಮಲೇಶ್, ಸುಗುಟೂರು ವೇಣು, ಕುಡುವನಹಳ್ಳಿ ಆಂಜಿ, ರಂಗನಾಥ್ ಉಪಸ್ಥಿತರಿದ್ದರು.