
ಬೆಂಗಳೂರು, ಮೇ ೮-ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರದ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕಿಗೆ ಇಂದು ಬೆಳಿಗ್ಗೆ ಸಚಿವ ಗೋಪಾಲಯ್ಯನವರು ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ರೇಣುಕಾರಾಧ್ಯ, ನಿಸರ್ಗ ಜಗದೀಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ ಸಭಾವತಿ ೭೪ನೇ ವಾರ್ಡಿನಲ್ಲಿ ಮಾಜಿ ಉಪಮೇಯ ಶ್ರೀಮತಿ ಹೇಮಲತಾ ಗೋಪಾಲಯ್ಯರವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಇದೇ ಸಂದರ್ಭದಲ್ಲಿ ಹೇಮಂತ್‌ಸ್ವಾಮಿ, ಎಸ್. ಪಿ. ಉಮೇಶ್, ವಾರ್ಡ್ ಅಧ್ಯಕ್ಷೆ ರತ್ನಮ್ಮ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.