ಸಚಿವ ಗೋವಿಂದ ಕಾರಜೋಳರಿಂದ ಪ್ರಗತಿ ಪರಿಶೀಲನೆ ಸಭೆ

ಹೊಸಪೇಟೆ ನ 20 :ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ಇಂದು ಇಲ್ಲಿನ ಅಮರಾವತಿ ಅತಿಥಿ ಗೃಹದಲ್ಲಿ ನಡೆಯಿತು.
ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಬಾರ್ಡ್ ಯೋಜನೆಯಡಿ ಕೈಗೊಂಡಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿ, 2020-21ರ ಪ್ರವಾಹ ಪರಿಹಾರ ಕಾಮಗಾರಿಗಳ ಪ್ರಗತಿ ವರದಿ ಸೇರಿದಂತೆ ಇಲಾಖೆಯ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭಧ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಹೊಸಪೇಟೆ ಸಹಾಯಕ ಆಯುಕ್ತರಾದ ಶೇಖ್ ತನ್ವೀರ್ ಆಸೀಫ್, ತಹಶೀಲ್ದಾರರಾದ ಹೆಚ್.ವಿಶ್ವನಾಥ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.