ಸಚಿವ ಜಗದೀಶ್ ಶೆಟ್ಟರ್ ಪುತ್ರನ‌ ಕಾರು ಅಪಘಾತ ಇಬ್ಬರಿಗೆ ಗಾಯ

ದಾವಣಗೆರೆ,ನ.10-ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.
ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‍ಐ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.