ಸಚಿವ ನಾಗೇಂದ್ರ  ನೇತೃತ್ವದಲ್ಲಿ  ಕೋಟೆ ಮಲ್ಲೇಶ್ವರ ಸ್ವಾಮಿ ಜಾತ್ರೆ ಪೂರ್ವಭಾವಿ ಸಭೆ 


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಫೆ.19: ನಗರದ ಆರಾಧ್ಯ ಧೈವ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಜಾತ್ರೆ ಹಾಗೂ ಮಹಾ ರಥೋತ್ಸವದ ಪೂರ್ವಭಾವಿ ಸಭೆ ಸ್ವಾಮಿಯ  ದೇವಸ್ಥಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಇಂದು ನಡೆಯಿತು.
ಪ್ರತಿ ವರ್ಷದಂತೆ ಈ ವರ್ಷವು ಸಹ ಅದ್ಧೂರಿಯಾಗಿ ಬಳ್ಳಾರಿಯ ಅರಾದ್ಯ ದೈವ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವನ್ನು ಅದ್ಧೂರಿಯಾಗಿ ಹಾಗೂ ಸಂಪ್ರದಾಯ ಬದ್ದವಾಗಿ ಆಚರಿಸಲಾಗುವುದು ಎಂದ ಅವರು ಜಾತ್ರಾ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಅಗಮಿಸುವ ಹಿನ್ನೆಲೆಯಲ್ಲಿ ನಿರ್ಮಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಹಾಗೇಯೇ ಜಾತ್ರೆಗೆ ಅಗಮಿಸುವ ಜನರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ, ತೇರಿನ ನಿರ್ವಹಣೆ ಜೊತೆಗೆ ಧಾರ್ಮಿಕ ಆಚರಣೆಗೆ ದೇವಸ್ಥಾನದ ಒಳಗಡೆ ಹಾಗೂ ಹೊರಗಡೆ ವ್ಯವಸ್ಥೆಗಳನ್ನು ಮಾಡಲಾಗುವುದಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜಾತ್ರೆಗೆ ಮೆರಗು ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಮೇಯರ್ ಶ್ವೇತ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಎಸ್ಪಿ ರಂಜಿತ್ ಕುಮಾರ್ ಬಂಡಾರು.‌ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಹಾಜರಿದ್ದರು.